Ticker

6/recent/ticker-posts

ಬೆಳಗಾವಿ: 15 ಕ್ಷೇತ್ರಗಳಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಅಕ್ಟೋಬರ್ 4 ಕೊನೆಯ ದಿನ.

15 ಕ್ಷೇತ್ರಗಳಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಅಕ್ಟೋಬರ್ 4 ಕೊನೆಯ ದಿನ. ಅಕ್ಟೋಬರ್ 21 ಕ್ಕೆ ಮತದಾನ ನಡೆಯಲಿದೆ ಹಾಗೂ 24 ರಂದು ಫಲಿತಾಂಶ ಹೊರಬೀಳಲಿದೆ.

ಚಂದ್ರನ ದಕ್ಷಿಣ ಧೃವದಲ್ಲಿ ಆವರಿಸುತ್ತಿರುವ ಕತ್ತಲು, ವಿಕ್ರಮ್ ನನ್ನು ಮರೆಯಬೇಕಾ?

ಇನ್ನು ತಮ್ಮನ್ನು ಅನರ್ಹಗೊಳಿಸಿರುವ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರ ತೀರ್ಮಾನ ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸೋಮವಾರ ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದೆ ಸುಪ್ರೀಂಕೋರ್ಟ್. ಸುಪ್ರೀಂಕೋರ್ಟ್ ಸೋಮವಾರ ನೀಡುವ ತೀರ್ಪಿನ ಮೇಲೆ ಈಗ ಅನರ್ಹ ಶಾಸಕರ ಭವಿಷ್ಯ ಅಡಗಿದೆ.
ಅನರ್ಹ ಶಾಸಕರ ಅರ್ಜಿ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ಆರಂಭವಾಗಿಯೇ ಇಲ್ಲ, ಇದರ ನಡುವೆ ಅನರ್ಹ ಶಾಸಕರಿಗೆ ಚುನಾವಣಾ ಆಯೋಗ ಆಘಾತ ನೀಡಿದೆ.
17 ಅನರ್ಹ ಶಾಸಕರ ಕ್ಷೇತ್ರಗಳ ಪೈಕಿ‌ 15 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ ಎಂದು ಪ್ರಕಟಿಸಿದೆ.
ವಿ.ಮುನಿರತ್ನ ಅವರ ರಾಜರಾಜೇಶ್ವರಿ ನಗರ, ಪ್ರತಾಪ್ ಗೌಡ ಅವರು ಪ್ರತಿನಿಧಿಸುತ್ತಿದ್ದ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿಲ್ಲ.