ಅನರ್ಹಗೊಂಡಿರುವ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಉಪಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ದಿನಾಂಕ ಪ್ರಕಟಿಸಿದೆ.
ಒಟ್ಟು 17 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿತ್ತು. ರಾಣೆಬೆನ್ನೂರು ಮತ್ತು ವಿಜಯನಗರ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ನ್ಯಾಯಾಲಯ ತಡೆ ನೀಡಿರುವುದರಿಂದ ಉಳಿದ 15 ಕ್ಷೇತ್ರಗಳಿಗೆಚುನಾವಣೆ ನಡೆಯಲಿದೆ.
ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು ಅ.24ಕ್ಕೆ ಫಲಿತಾಂಶ ಹೊರ ಬರಲಿದೆ. ಉಪಚುನಾವಣೆ ದಿನಾಂಕ ಪ್ರಕಟವಾಗಿರುವುದರಿಂದ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.



