ಚನ್ನರಾಯಪಟ್ಟಣ ಶಾಲಿನಿ ವಿದ್ಯಾಶಾಲೆ, ಭೂಮಿ ಉಳಿಸಿ ಆಂದೋಲನ’ ಸ್ನೇಹ ಬಳಗ, ಮಕ್ಕಳ ಸಾಹಿತ್ಯ ಪರಿಷತ್,ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಿ ಎನ್ ಅಶೋಕ್ ಅವರು ಬೆಳೆದ 40 ಸಾವಿರ ಗಿಡಗಳ ಉಚಿತ ವಿತರಣಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.
ಚನ್ನರಾಯಪಟ್ಟಣ ಶಾಲಿನಿ ವಿದ್ಯಾಶಾಲೆ, ಭೂಮಿ ಉಳಿಸಿ ಆಂದೋಲನ’ ಸ್ನೇಹ ಬಳಗ, ಮಕ್ಕಳ ಸಾಹಿತ್ಯ ಪರಿಷತ್, ಬೆಳಕು ಹಳೆಯ ವಿದ್ಯಾರ್ಥಿಗಳ ಸೇವಾ ಸಂಘ, ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಿ ಎನ್ ಅಶೋಕ್ ಅವರು ಬೆಳೆದ 40 ಸಾವಿರ ಗಿಡಗಳ ಉಚಿತ ವಿತರಣಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಗಳವರು, ಶಾಸಕರಾದ ಶ್ರೀ ಸಿ ಎನ್ ಬಾಲಕೃಷ್ಣರವರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕನವರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶ್ರೀ ಸಿ ಎನ್ ಅಶೋಕ್ ರವರು ಹಾಗೂ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.