
ನಾಗಮಂಗಲದ ಎಸ್ಎ ಸಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ರಕ್ತದಾನದ ಮಹತ್ವ ಎಂಬ ವಿಷಯದ ಮೇಲೆ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಾಗಮಂಗಲ ಈ ಕಾಲೇಜಿನ ವಿದ್ಯಾರ್ಥಿಗಳಾದ ಚಂದನ್ ಗೌಡ H B ದ್ವಿತೀಯ ಬಿ.ಎ .ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಹಾಗೂ ದಿನೇಶ್ ಎಂ.ವಿ ದ್ವಿತೀಯ ಬಿ ಕಾಂ. ತೃತೀಯ ಬಹುಮಾನವನ್ನು ಪಡೆದಿರುತ್ತಾರೆ. ಹಾಗೂ
ಮಂಡ್ಯದಲ್ಲಿ ಮಹಿಳಾ ಕಾಲೇಜಿನಲ್ಲಿ ನಡೆದ ಅಂತರಕಾಲೇಜು ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಾಗಮಂಗಲ ಈ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅದರಲ್ಲಿ ಚೈತ್ರ ದ್ವಿತೀಯ ಬಿ.ಬಿ.ಎಂ. ವಿದ್ಯಾರ್ಥಿನಿಯು ಭಾವಗೀತೆಯಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಲವ ಕುಮಾರ ತೃತೀಯ ಬಿ.ಎ .ವಿದ್ಯಾರ್ಥಿಯು ಜನಪದ ಗೀತೆ ಸ್ಪರ್ಧೆಯಲ್ಲಿ ಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
