*ಹೊಸ ವರ್ಷಕ್ಕೆ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ- ಮೂರು ದಿನಗಳ ಕಾಲ ನಂದಿ ಬೆಟ್ಟಕ್ಕೆ ಪ್ರವೇಶ ಇಲ್ಲ*
ಚಿಕ್ಕಬಳ್ಳಾಪುರ,ಡಿ,
- ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಡಿ.30 ರಿಂದ ಜನವರಿ 2 ವರೆಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ
, ಹೊಸ ವರ್ಷ ಆಚರಣೆ ಹಿನ್ನಲೆಯಲ್ಲಿ ಪ್ರವಾಸಿಗರು ಹೆಚ್ವಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. …
ಪ್ರತಿ ಬಾರಿ ಹೊಸ ವರ್ಷಕ್ಕೆ ಒಂದು ದಿನದ ಮಟ್ಟಿಗೆ ನಂದಿಗಿರಿ ಧಾಮಕ್ಕೆ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತಿತ್ತು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮ ಪ್ರವೇಶವನ್ನು ಪ್ರವಾಸಿಗರಿಗೆ ನಿಷೇಧಿಸಿದೆ.
ಇನ್ನು ಹೊಸ ವರ್ಷದ ದಿನ ಮೈಸೂರಿನ ಚಾಮುಂಡಿಬೆಟ್ಟಕ್ಕೂ ಕೂಡ ನಿರ್ಬಂಧ ವಿಧಿಸಲಾಗಿದೆ. ಅತಿ ಹೆಚ್ಚು ಜನರು ಬೆಟ್ಟಕ್ಕೆ ಬಂದರೆ ವ್ಯಾಪಕವಾಗಿ ಕೊರೊನಾ ಹರಡುತ್ತದೆ ಎಂಬ ಕಾರಣದಿಂದ ಚಾಮುಂಡಿಬೆಟ್ಟಕ್ಕೆ ನಿರ್ಬಂಧ ವಿಧಿಸಲಾಗಿದೆ.


