Ticker

6/recent/ticker-posts

ನಾಡಪ್ರಭು ಕೆಂಪೇಗೌಡ ಅವರ ಪುತ್ತಳಿ ಅನಾವರಣ


ಚಿಕ್ಕಬಳ್ಳಾಪುರ:- ನಗರ ಒಕ್ಕಲಿಗರ ಕಲ್ಯಾಣ ಮಂಟಪದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ನಡೆಯಿತು.
ಈ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರುದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿಯವರು, ಸಚಿವರಾದ ಡಾ. ಕೆ ಸುಧಾಕರ್ ಅವರು, ಚಿಕ್ಕಬಳ್ಳಾಪುರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀ ಪಿ ಎನ್ ಕೇಶವರೆಡ್ಡಿ ಅವರು, ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಶ್ರೀ ಕೆ ವಿ ನಾಗರಾಜು ಅವರು,  ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು, ಚಿಕ್ಕಬಳ್ಳಾಪುರ ಒಕ್ಕಲಿಗರ ಸಂಘದ ನಿರ್ದೇಶಕರು, ಸದಸ್ಯರು, ಚಿಕ್ಕಬಳ್ಳಾಪುರ ಜಿಲ್ಲೆಯ ತಾಲ್ಲೂಕು ಒಕ್ಕಲಿಗರ ಸಂಘದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.