Ticker

6/recent/ticker-posts

*ಗಡಿಗ್ರಾಮಗಳ ಮೂಲಸೌಕರ್ಯಗಳಿಗೆ ಆದ್ಯತೆ :ಸಚಿವ ಚೆಲುವರಾಯಸ್ವಾಮಿ*



ಚುನಾವಣೆ ವೇಳೆ ನುಡಿದಂತೆ ಭರವಸೆಯ ಈಡೇರಿಕೆ

ನಾಗಮಂಗಲ. ಮಾ: 29 ಗ್ರಾಮದ ಏಳಿಗೆ ಅಭಿವೃದ್ಧಿ ಪಥದ ಹೆಜ್ಜೆಗೆ ನುಡಿದಂತೆ ನಡೆದಿದ್ದು ಈ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗಿ ಸಹಕಾರಿ ಎಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಅವರು ಇಂದು ನಾಗಮಂಗಲ ತಾಲೂಕಿನ ಗಡಿ ಗ್ರಾಮ ಚಂದ್ರಶೇಖರಪುರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿಪಿ ಟಿಎಸ್‌ಪಿ  ಯೋಜನೆಯ 2ಕೋಟಿ ರು. ವೆಚ್ಚದಲ್ಲಿ ಕಾಂಕ್ರಿಟ್ ಮತ್ತು ಡಾಂಬರು ರಸ್ತೆ ನಿರ್ಮಾಣ ಕಾಮಗಾರಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಸಂಜೆ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಕಳೆದ ಚುನಾವಣೆ ಸಂದರ್ಭದಲ್ಲಿ ತಾವು ನೀಡಿದ್ದ ಭರವಸೆಯಂತೆ ಗ್ರಾಮ ಪರಿಮಿತಿಯಲ್ಲಿ 1ಕೋಟಿ ರು.ವೆಚ್ಚದ ಕಾಂಕ್ರಿಟ್ ರಸ್ತೆ ಹಾಗೂ ಗ್ರಾಮದಿಂದ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಲು 1ಕೋಟಿ  ರು. ವೆಚ್ಚದ ಡಾಂಬರು ರಸ್ತೆ ನಿರ್ಮಿಸಲಾಗುತ್ತಿದೆ. ಇನ್ನುಳಿದ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಜನರ ಹಾಗೂ ವಾಹನಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ನಾಡಿನ ಎಲ್ಲ ವರ್ಗಗಳ ಬಡಜನರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮೀಣ ಪ್ರದೇಶದ ಜನರು ಶಾಂತಿ ನೆಮ್ಮದಿಯ ಜೀವನ ನಡೆಸಬೇಕು. ಜನರಿಗೆ ಇಷ್ಟೆಲ್ಲಾ ಅನುಕೂಲ ಮಾಡಿಕೊಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಇಂತಹ ಕುಗ್ರಾಮಗಳನ್ನೂ ಸಹ ಕಡೆಗಣಿಸದೆ ಅಗತ್ಯ ಮೂಲ ಸೌಕರ್ಯ ಒದಗಿಸುವವರಿಗೆ ಕೃತಜ್ಞರಾಗಿರಬೇಕು. ಚುನಾವಣೆ ಸಂದರ್ಭದಲ್ಲಿ ಬಂದು ಸುಳ್ಳು ಆಶ್ವಾಸನೆಗಳನ್ನು ಕೊಟ್ಟು ಹೋಗುವವರನ್ನು ನಂಬಬಾರದು ಎಂದು ತಿಳಿಸಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ರಾಜ್ಯ ಸಾವಯವ ಕೃಷಿ ಉನ್ನತ ಸಮಿತಿಯ ಮಾಜಿ ಉಪಾಧ್ಯಕ್ಷ ಎಚ್.ಟಿ.ಕೃಷ್ಣೇಗೌಡ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ವಿ.ದಿನೇಶ್, ಕೆಆರ್‌ಡಿಎಲ್‌ನ ಎಇಇ ಚೈತ್ರ, ಪುರಸಭೆ ನಾಮನಿರ್ದೇಶಿತ ಸದಸ್ಯ ನರಸಿಂಹ ಮುಖಂಡರಾದ ನೆಲ್ಲಿಗೆರೆ ಚೇತನ್, ಶಿವಣ್ಣ, ಸುರೇಶ್, ರಮೇಶ, ಐಯ್ಯಪ್ಪ, ಶ್ರೀನಿವಾಸ್, ದಿನೇಶ್ ಸೇರಿದಂತೆ ಹಲವರು ಇದ್ದರು.