ಮಂಡ್ಯ :-ಜಿಲ್ಲೆಯಲ್ಲಿ 3.80 ಕೋಟಿ ವೆಚ್ಚದಲ್ಲಿ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಭವನ ನಿರ್ಮಾಣ ಮಾಡಲಾಗುವುದು ಅನುದಾನ ಕೊರತೆ ಉಂಟಾದರೆ ಹೆಚ್ಚುವರಿ ಅನುದಾನ ಪಡೆದು ಭವನವನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.
ಇಂದು .5 ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಡಾ . ಬಾಬು ಜಗಜೀವನ ರಾಂ118ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೇಶ ನಿರ್ಮಾಣದಲ್ಲಿ ಬಹು ಮುಖ್ಯ ಪಾತ್ರ ನಿರ್ವಹಿಸಿದ ಮಹಾನೀಯರ ಕುರಿತು ಯುವ ಪೀಳಿಗೆಗೆ ಅರಿವು ಮೂಡಿಸುವ ಸಲುವಾಗಿ ಅನೇಕ ಸಾಧಕರ ಜಯಂತಿಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
1935ರಲ್ಲಿ ಅಖಿಲ ಭಾರತ ಶೋಷಿತ ಸಮುದಾಯಗಳ ಹೋರಾಟ ಸಮಿತಿಯನ್ನು ರಚಿಸಿ ಅಸ್ಪೃಶ್ಯತೆ ವಿರುಧ್ಧ ಹೊರಾಡಿದವರೂ ಬಾಬು ಜಗಜೀವನ ರಾಂ ಎಂದು ಹೇಳಿದರು.
ಬಾಬು ಜಗಜೀವನ ರಾಂ ಸುದೀರ್ಘ 30 ವರ್ಷಗಳ ಕಾಲ ಕೇಂದ್ರ ಮಂತ್ರಿಗಳಾಗಿದ್ದರು, ನಂತರ ಭಾರತದ ಉಪ ಪ್ರಧಾನಿಯಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ,
ತಮ್ಮ ವೃತ್ತಿ ಜೀವನದುದ್ದಕ್ಕೂ ದೇಶದ ಅಭಿವೃದ್ಧಿಗೆ ಶೋಷಿತರ ಏಳಿಗೆಗಾಗಿ ಶ್ರಮಿಸಿದವರು ಎಂದು ಬಣ್ಣಿಸಿದರು.
ಬಾಬು ಜಗಜೀವನ ರಾಂ ಯಾವುದೇ ಸಮಾಜಕ್ಕೆ ಸೀಮಿತವಲ್ಲ ಅವರು ನಮ್ಮ ದೇಶದ ಆಸ್ತಿ, ಸಾರ್ವಕಾಲಕ್ಕೂ ಸರ್ವರೂ ಪ್ರೀತಿಸುವ ನಾಯಕರ ಸಾಲಿನಲ್ಲಿ ಇವರು ಸಹ ಒಬ್ಬರು. ಜವಾಹರಲಾಲ್ ನೆಹರೂ,ಡಾ .ಅಂಬೇಡ್ಕರ್, ಗಾಂಧೀಜಿ ಅರಂತಹ ಮಹನೀಯರು ಹೇಳಿದಂತೆ ಇವತ್ತಿಗೂ ಭಾರತ ಜ್ಯಾತ್ಯಾತೀತ ರಾಷ್ಟ್ರವಾಗಿದೆ ಎಂದು ಹೇಳಿದರು.
ನಮ್ಮ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಯ ಮೂಲಕ ರಾಜ್ಯದ ಪ್ರತಿ ಮನೆಗೂ ರೂ 5000 ತಲುಪುತ್ತಿದೆ, ಹಾಲಿನ ಮೇಲಿನ ಹೆಚ್ಚುವರಿಯಾಗಿ ನಿಗದಿಸಿರುವ 4 ರೂಪಾಯಿಯನ್ನು ರೈತರಿಗೆ ನೀಡಲಾಗುತ್ತಿದೆ, ಸಾರ್ವಜನಿಕರು ಯಾರ ಆಡಳಿತ ಅವಧಿಯಲ್ಲಿ ದೇಶದ ಅಭಿವೃದ್ಧಿ ಹಾಗೂ ಜನರಿಗೆ ಶಕ್ತಿಯನ್ನು ತುಂಬುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಂಡಾಗ ಮಾತ್ರ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಹೇಳಿದರು.
ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಅವರು ಮಾತನಾಡಿ ಬಾಂಗ್ಲಾ ವಿಮೋಚನೆಯ ಸಂದರ್ಭದಲ್ಲಿ ದೇಶದಲ್ಲಿ ಉದ್ಭವಿಸಿದ ಆಹಾರ ಕೊರತೆಯಿಂದ ಸಾರ್ವಜನಿಕರು ತತ್ತರಿಸುತ್ತಿದ್ದಾಗ ಸರ್ಕಾರಿ ಮತ್ತು ಖಾಸಗಿ ಗೋದಾಮುಗಳಲ್ಲಿ ಶೇಖರಿಸಿ ಇಡಲಾಗಿದ್ದ ಆಹಾರ ಧಾನ್ಯಗಳನ್ನು ದೇಶದ ಜನತೆಗೆ ನೀಡಿ ಹಸಿವು ನೀಗಿಸಿದ ಮಹಾನ್ ಚೇತನ ರಾಜಕೀಯ ಮುತ್ಸದ್ದಿ ಬಾಬು ಜಗಜೀವನ ರಾಂ ಎಂದು ಹೇಳಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ವೇದಿಕೆಯ ಮೇಲೆ ಸನ್ಮಾನಿಸಿ ಗೌರವಿಸಲಾಯಿತು,
ಬಾಬು ಜಗಜೀವನ್ ರಾಂ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಚರ್ಚ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಶಾಲಾ ಕಾಲೇಜಿನ ಮಕ್ಕಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮೈ ಶುಗರ್ ಕಾರ್ಖಾನೆಯ ಅಧ್ಯಕ್ಷ ಸಿ. ಡಿ. ಗಂಗಾಧರ, ಮುಡಾ ಅಧ್ಯಕ್ಷ ನಯೀಮ್ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, , ಮಂಡ್ಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಮಂಜು, ಡಾ. ಬಾಬು ಜಗಜೀವನ ರಾಂ ಸಂಘದ ಜಿಲ್ಲಾ ಅಧ್ಯಕ್ಷ ಎನ್. ಆರ್. ಚಂದ್ರ. ಡಿ. ದೇವರಾಜ ಅರಸ್ ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ಎಲ್. ಸಂದೇಶ್, ದಲಿತ ಸಮಾಜದ ಮುಖಂಡರಾದ ಕೃಷ್ಣ, ಸಿ. ಕೆ. ಪಾಪಯ್ಯ ಸೇರಿದಂತೆ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.
