Ticker

6/recent/ticker-posts

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಚಿವರಾದ ಚೆಲುವಯಸ್ವಾಮಿಯವರ ಪುತ್ರ ಸಚ್ಚಿನ್ ನಾಮಪತ್ರ ಸಲ್ಲಿಕೆ


ನಾಗಮಂಗಲ :ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚ್ಚಿನ್ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. 

ಸಚಿವರ ಸಹೋದರ ಎನ್.ಲಕ್ಷ್ಮೀಕಾಂತ್, ಸಚ್ಚಿನ್ ಪತ್ನಿ ಆಕಾಂಕ್ಷ, ಮಾಜಿ ಎಂಎಲ್‌ಸಿ ಮತ್ತು ಮನ್‌ಮುಲ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಮುಖಂಡರಾದ ಸುನಿಲ್ ಲಕ್ಷೀಕಾಂತ್, ಕೊಣನೂರು ಆನಂದ್, ಉಮೇಶ್ ಇದ್ದರು.