ಮಂಡ್ಯ :-ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಮದ್ದೂರು ತಾಲೋಕಿನ ಯಡಗನಹಳ್ಳಿ ಗ್ರಾಮದ ಡಾ. ಮೂರ್ತಿರವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದು ಸುಮಾರು ಎರಡು ವರ್ಷಗಳ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತಾಸಕ್ತಿಯನ್ನು ಕಾಪಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಯಿಗಿದೆ .
ವೃತ್ತಿಯಲ್ಲಿ ವೈದ್ಯರಾಗಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರ ಆಪ್ತ ಬಣದಲ್ಲಿ ಗುರುತಿಸಿಕೊಂಡು ಮಂಡ್ಯ ಹಾಗೂ ಮಳವಳ್ಳಿ ತಾಲೋಕಿನಲ್ಲಿ ಆದರ್ಶ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ರಾಜಕಾರಣಿಯಾಗಿರುವ ಡಾ. ಮೂರ್ತಿ ರವರನ್ನು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಮುಂದಿನ ಆದೇಶದ ವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇದೆ ಸೋಮವಾರ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಎಸ್ಸಿ ಎಸ್ಟಿ ಆಯೋಗದ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಡಾ.ಮೂರ್ತಿರವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ವರಧಿ :- ಸಂತೋಷ್ ಟಿಬಿ*