ಮಂಗಳೂರು:ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲಸೇವೆ ಸಲ್ಲಿಸಿ ನಿವೃತ್ತರಾಗಿ ಊರಿಗೆ ಹಿಂತಿರುಗಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿವೇಕಾನಂದ ನಗರ ನಿವಾಸಿ ಎನ್.ಕೆ ಅಶೋಕ್ ಕುಮಾರ್ ಅವರಿಗೆ ಬೆಳ್ತಂಗಡಿಯಲ್ಲಿ ಸಾರ್ವಜನಿಕರು ಭವ್ಯ ಸ್ವಾಗತ ಕೋರಿದರು.
2003 ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆ ಯಾದ ಅವರು ಬೆಂಗಳೂರು ಜಮ್ಮು, ಕೊಲ್ಕತ್ತಾ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿ ಇದೀಗ ಸೇವಾ ನಿವೃತ್ತರಾಗಿದ್ದಾರೆ.
ಅ3 ರಂದು ಅವರನ್ನು ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ಯಲ್ಲಿ ಸ್ವಾಗತಿಸಲಾಯಿತು. ಬಳಿಕ ತೆರೆದ ವಾಹನದಲದಲಿ ಅವರನ್ನು ಮನೆಯ ವರೆಗೆ ಕರೆದೊಯ್ಯಲಾಯಿತು. ಈ ಸಂದರ್ಭದಲ್ಲಿ ಮೋಹನ್ ಗೌಡ ಕಲ್ಮಂಜ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.