Ticker

6/recent/ticker-posts

*ಮಹಾತ್ಮ ಗಾಂಧೀಜಿ ಲಾಲ್ ಬಹುದ್ದೂರ್ ಶಾಸ್ತ್ರಿ ತತ್ವ ಸಿದ್ಧಾಂತ ಸರ್ವಕಾಲಕ್ಕೂ ಪೂರಕ*

ನಾಗಮಂಗಲ.ಅ:- 2 ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ತತ್ವ ಸಿದ್ಧಾಂತಗಳು ಸರ್ವಕಾಲಕ್ಕೂ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸೀತಾರಾಮ ತಿಳಿಸಿದರು.

  ಅವರು ಇಂದು ನಾಗಮಂಗಲ ತಾಲೂಕು, ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಲಾಲ್ ಬಹುದ್ದೂರ್ ಶಾಸ್ತ್ರಿಯ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು

 ಗಾಂಧೀಜಿಯವರು ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಪ್ರತಿಪಾದಿಸಿದ ತತ್ವ ಸಿದ್ದಾಂತಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಆ ತತ್ವ ಸಿದ್ದಾಂತಗಳು ದೇಶದ ಅಭಿವೃದ್ಧಿಗೆ ಪೂರಕವಾಗಿವೆ ಈ ಸಿದ್ದಾಂತಗಳನ್ನು ಅನುಸರಿಸಿದರೆ ಮಾತ್ರವೇ ದೇಶ ಪ್ರಗತಿ ಕಾಣಲು ಸಾಧ್ಯವಾಗುತ್ತದೆ ಎಂದರು.
 ಗಾಂಧಿಜೀಯವರದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸಲು ಅವರ ಜನ್ಮದಿನವಾದ ಅಕ್ಟೋಬರ್ 2 ಅನ್ನು ರಾಷ್ಟ್ರೀಯ ರಜಾದಿನವೆಂದು ಗುರುತಿಸಲಾಗಿದೆ. ವಿಶ್ವಸಂಸ್ಥೆಯು ಗಾಂಧಿ ಜಯಂತಿಯನ್ನು ಅಂತರಾಷ್ಟ್ರೀಯ ಅಹಿಂಸಾ ದಿನ ಎಂದು ಆಚರಿಸಿ ಮಹಾತ್ಮ ಗಾಂಧಿಗೆ ತಮ್ಮ ಗೌರವ ನಮನಗಳನ್ನು ಸಲ್ಲಿಸುತ್ತದೆ ಎಂದರು.

ಮಹಾತ್ಮ ಗಾಂಧೀಜಿಯವರ ತತ್ವಗಳು ದೇಶದ ಪೂರಕವಾದ ವ್ಯವಸ್ಥೆ ಇದ್ದು ಅವರುಗಳ ರಾಮರಾಜ್ಯದ ಕನಸು ನನಸು ಮಾಡಲು ಅವರ ಸಿದ್ಧಾಂತಗಳು ಅನ್ವಯವಾಗಲಿದೆ ಎಂದು ಜಿಲ್ಲಾ  ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರತಿನಿಧಿಯಾದ ಸಿಎನ್ ಮಂಜುನಾಥ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಂಘದ ಸದಸ್ಯರುಗಳಾದ ಮಹೇಶ್. ದೇ. ರಾ. ಜಗದೀಶ್ ಶ್ರೀನಿವಾಸ್. ಕೌಶಿಕ್. ವಸಂತ್ ರವಿ ಹಾಜರಿದ್ದರು.