Ticker

6/recent/ticker-posts

ಸರ್ಕಾರಿ ಶುಶ್ರೂಷಕರ ಶಾಲೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಾಮರಾಜನಗರ-ಮಾರ್ಚ್ ೧೭-ಶುಶ್ರೂಷಕ ವಿದ್ಯಾರ್ಥಿಗಳ ಸಾಧನೆಗೆ ಮೈಸೂರಿನ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ತರಬೇತಿ ಕೆಂದ್ರದ ಆಡಳಿತಾಧಿಕಾರಿ ಡಾ.ಆಶಾ.ಎಸ್ ರವರು ಮೆಚ್ಚುಗೆ ವ್ಯಕ್ತ ಪಡಿಸಿದರು.

ನಗರದ ಜೋಡಿರಸ್ತೆಯ ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿ ಇರುವ ಸರ್ಕಾರಿ ಶುಶ್ರೂಷಕರ ಶಾಲೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ  ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಿ ಅವರು ಮಾತನಾಡಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಸರ್ಕಾರಿ ಶುಶ್ರೂಷಕರ ಶಾಲೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುತ್ತಿದೆ. ಶಾಲೆಯ ವಿದ್ಯಾರ್ಥಿಗಳು ಆಸ್ಪತ್ರೆಗಳಲ್ಲಿ ಸಾರ್ವಜನಿಕರ ಜೊತೆಯಲ್ಲಿ ಉತ್ತಮ ಭಾಂದವ್ಯವನ್ನು ಇಟ್ಟುಕೊಂಡು ಶಿಕ್ಷಣದಲ್ಲಿ ಸಾಧನೆ ಮಾಡುತ್ತಿದ್ದಾರೆ. ಎಂದು ಹೇಳಿದರು.

ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶುಶ್ರೂಷಕರ ಶಾಲೆಯಲ್ಲಿ  ಕರ್ನಾಟಕದ ಹಲವಾರು ಗಡಿ ಜಿಲ್ಲೆಗಳಿಂದ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ  ತರಬೇತಿ ಪಡೆದ ವಿದ್ಯಾರ್ಥಿಗಳು ಖಾಸಗಿ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣದ ಕಡೆ ಗಮನಹರಿಸಿ ಶಾಲೆಗೆ ಕೀರ್ತಿತರಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ದಾನಿಗಳು ಇಚ್ಚಿಸಿದಲ್ಲ ವಿದ್ಯಾರ್ಥಿಗಳಿಗೆ  ಪುಸ್ತಕದ ರೂಪದಲ್ಲಿ ದಾನಮಾಡಿರೆ ಇನ್ನು ಹೆಚ್ಚಿನ ಮಟ್ಟದಲ್ಲಿ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ೩ನೇ ವರ್ಷದ ವಿದ್ಯಾರ್ಥಿ ಪ್ರೇಮಾ ೮೧% ಹಾಗೂ ೨ನೇ ವರ್ಷದ ವಿದ್ಯಾರ್ಥಿಗಳಾದ  ವೈ.ಮಾನಸ ೮೦% ಕೀರ್ತನಾ ೮೦% ಇವರನ್ನು ತರಬೇತಿ ಕೇಂದ್ರದ ಆಡಳಿತಾಧಿಕಾರಿ ಡಾ.ಆಶಾ.ಎಸ್ ಅವರು ಗೌರವಿಸಿ ಸನ್ಮಾನಿಸಿದರು.

ಸರ್ಕಾರಿ ಶುಶ್ರೂಷಕರ ಶಾಲೆಯಲ್ಲಿ ೩೫ ವಿದ್ಯಾರ್ಥಿಗಳು ಪ್ರಥಮದರ್ಜೆಯಲ್ಲಿ ಹಾಗೂ ೨೧ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಜಿ.ಎನ್.ಎಂ ಶಾಲೆಯ ಪ್ರಾಂಶುಪಾಲರಾದ ಕೆ.ಕಮಲ ತಿಳಿಸಿದರು..
ಈ ಸಂದರ್ಭದಲ್ಲಿ ಮೈಸೂರಿನ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ತರಬೇತಿ ಕೆಂದ್ರದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಾದ ವೆಂಕಟಲಕ್ಷಿö್ಮ ಡಿವೈಹೆಚ್‌ಓ, ರವಿಚಂದ್ರ.ಪಿ ಡಿಇಓ ಮತ್ತು, ಭೋಧಕರಾದ ಸೌಮ್ಯ,.ಎಂ, ಕಾವ್ಯ.ಜೆ.ಎಸ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.