ಮದ್ದೂರು:-ಬೇಸಿಗೆ ಹಿನ್ನೆಲೆಯಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ತಾಲೂಕಿನ ಕೊಪ್ಪ ಹೋಬಳಿಯ ಕೀಳಘಟ್ಟ, ಆಬಲವಾಡಿ ಹಾಗೂ ಮೂಡಲದೊಡ್ಡಿ ಗ್ರಾಮಗಳಲ್ಲಿ ಸುಮಾರು 5 ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಈ ಬಗ್ಗೆ ಈಗಾಗಲೇ ಸಚಿವ ಕೃಷ್ಣ ಭೈರೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾನು ಹಾಗೂ ಸಚಿವ ಪ್ರಿಯಾಂಕ ಖರ್ಗೆ ರವರುಗಳು ಭಾಗವಹಿಸಿದ್ದೆವು, ಅದರಲ್ಲಿ ಕುಡಿಯುವ ನೀರಿಗೆ ಸೇರಿದಂತೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಧಿಕಾರಿಗಳಿಗೆ ತಾಕೀತು ಮಾಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರಿನ ಸಂಗ್ರಹವಿದೆ ಎಂದ ಅವರು, ಹಾಗೂ ಕೆಲವು ಅಗತ್ಯವಿದ್ದ ಕಡೆಗಳಲ್ಲಿ ರೈತರ ಬೋರ್ವೆಲ್ ಗಳಿಂದಲೂ ಕುಡಿಯುವನೀರು ಪೂರೈಸಲು ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದ ಅವರು ಅದಕ್ಕಾಗಿಯೇ ಸೂಕ್ತ ಹಣ ಮೀಸಲಾಗಿರಿಸಿದೆ ಎಂದರು.
ನನ್ನ ಕ್ಷೇತ್ರವಾದ ನಾಗಮಂಗಲದ ವ್ಯಾಪ್ತಿಯಲ್ಲೂ 4 ರಿಂದ 5 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವವಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು ಆದರೆ ಕೊಪ್ಪ ಹೋಬಳಿಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಿಲ್ಲ ಎಂದರು.
ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕಳಪೆ ಕಾಮಗಾರಿಗಳಾಗಿರುವ ಬಗ್ಗೆಗಿನ ಆರೋಪದ ಬಗ್ಗೆ ಸುದ್ದಿಗಾರರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪ ಸಾಬೀತಾದಲ್ಲಿ ತಪ್ಪಿತಸ್ಥ ಗುತ್ತಿಗೆದಾರರನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವುದಲ್ಲದೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದರು.
ನಾಗಮಂಗಲ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ದಿವಾಕರ್, ಡಿಸಿಸಿ ಬ್ಯಾಂಕ್ ನಿದರ್ೇಶಕ ಜೋಗಿಗೌಡ, ತಾ.ಪಂ ಮಾಜಿ ಉಪಾಧ್ಯಕ್ಷ ಬೆಕ್ಕಳಲೆ ರಘು, ಗ್ರಾಪಂ ಮಾಜಿ ಅಧ್ಯಕ್ಷ ವಿಜಯ್, ಸದಸ್ಯರಾದ ಕುಮಾರ್ ಕೊಪ್ಪ, ಪವರ್ೀಜ್ ಅಹಮದ್ ಮುಖಂಡರಾದ ಶಿವಲಿಂಗಯ್ಯ, ಕರಿಯಪ್ಪ, ರಮೇಶ್, ಗುಂಡ, ಮಲ್ಲೇಶ್, ರಾಜಣ್ಣ ಗುತ್ತಿಗೆದಾರರಾದ ಶಿವಪ್ಪ, ಕೆ.ಆರ್. ಮಹೇಶ್,ಸೇರಿದಂತೆ ಹಲವರು ಹಾಜರಿದ್ದರು.
