Ticker

6/recent/ticker-posts

ನಿರುದ್ಯೋಗ ಸಮಸ್ಯೆಗೆ ಉದ್ಯೋಗ ಮೇಳಗಳು ಸಹಕಾರಿ

ಮದ್ದೂರು:-ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಪ್ರತಿಭಾವಂತ ಯುವಕ-ಯುವತಿಯರಿಗೆ
ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಇದರ ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿದರ್ೇಶಕ ಎಸ್.ಪಿ.ಸ್ವಾಮಿ ತಿಳಿಸಿದರು.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀನಿಧಿಗೌಡ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ಮತ್ತು ಅಕ್ಷರ ಫೌಂಡೇಶನ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನ ಪ್ರತಿಭಾವಂತ ವಿದ್ಯಾಥರ್ಿಗಳಿಗೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಂಪ್ಯೂಟರ್ ಯುಗದಲ್ಲಿ ಉದ್ಯೋಗಗಳು ಕಡಿಮೆಯಾಗುತ್ತವೆ ಎಂಬ ಭ್ರಮೆ ಇದ್ದರೂ, ವಾಸ್ತವದಲ್ಲಿ ತಂತ್ರಜ್ಞಾನ ಮತ್ತು ಕಂಪ್ಯೂಟರ್ ಯುಗದಲ್ಲಿ ಉದ್ಯೋಗಾವಕಾಶ ಇನ್ನಷ್ಟು ಹೆಚ್ಚಾಗಿವೆ. ವಿದ್ಯಾಥರ್ಿಗಳು ತಮ್ಮ ಸೂಕ್ತ ದಾಖಲಾತಿಗಳನ್ನು ನೀಡಿ ಕಂಪನಿಯವರ ಜತೆ ಉದ್ಯೋಗ ಮೇಳದಲ್ಲಿ ಮಾಹಿತಿಯನ್ನು ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶ ಸಿಕ್ಕಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ರಾಜ್ಯ ಒಕ್ಕಲಿಗರ ಸಂಘದ ನಿದರ್ೇಶಕ ಅಶೋಕ್ ಜಯರಾಂ ಮಾತನಾಡಿ, ನಿರಂತರ ಪ್ರಯತ್ನ ಮಾಡಿದರೆ ಎಲ್ಲವೂ ಸಾಧ್ಯ. ಪ್ರತಿಯೊಬ್ಬ ವಿದ್ಯಾಥರ್ಿಯೂ ಸ್ವಾವಲಂಬಿಯಾಗಿ ಜೀವನ ನಡೆಸಬೇಕು. ಸಣ್ಣ ಸಣ್ಣ ವಿಷಯಗಳಲ್ಲಿ ಶಿಸ್ತು ಮತ್ತು ಜವಾಬ್ದಾರಿ ಬೆಳೆಸಿಕೊಂಡಾಗ ಸಾಧನೆಗೆ ಅನೇಕ ಅವಕಾಶಗಳು ದೊರಕುತ್ತವೆ ಎಂದು ಹೇಳಿದರು.

ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ ಮಾತನಾಡಿ, ಎಸ್.ಪಿ.ಸ್ವಾಮಿ ಅವರು ಕಳೆದ 20 ವರ್ಷಗಳಿಂದ ತಮ್ಮ ಪುತ್ರ ಶ್ರೀನಿಧಿ ಗೌಡ ಅವರ ಹೆಸರಿನಲ್ಲಿ ಪ್ರತಿ ವರ್ಷ ಉದ್ಯೋಗ ಮೇಳ, ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಬಡವರಿಗೆ ಉಚಿತ ಕಂಬಳಿ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಜನತೆ ರಾಜಕೀಯವಾಗಿ ಶಕ್ತಿ ನೀಡಿದರೇ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿಗೆ ಮುನ್ನುಡಿ ಬರೆಯಬಹುದು ಎಂದರು.

ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಯುವ ಜನತೆಗೆ ಉದ್ಯೋಗ ಕಲ್ಪಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕಂಪನಿಗಳು ರಾಜ್ಯದಿಂದ ಬೇರೆಡೆಗೆ ಸ್ಥಳಾಂತರವಾಗುತ್ತಿದೆ. ಸರಿಯಾಗಿ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿಲ್ಲ. ಎರಡು ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ ಇದ್ದರೂ ನೇಮಕಾತಿ ನಡೆದಿಲ್ಲ ಎಂದು ದೂರಿದರು.

ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ 60 ಕಂಪನಿಗಳು ಭಾಗಿಯಾಗಿ 500 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದು, ಸ್ಥಳದಲ್ಲಿಯೇ 157 ಮಂದಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು.
ಶಿವಪುರದ ಶ್ರೀ ರಾಜು ಸ್ವಾಮೀಜಿ, ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್, ಜಿ.ಪಂ ಮಾಜಿ ಸದಸ್ಯರಾದ ಕೃಷ್ಣೇಗೌಡ, ಮರಿಹೆಗ್ಗಡೆ, ಬೋರಯ್ಯ, ನಗರ ಘಟಕ ಅಧ್ಯಕ್ಷ ಮಧು ಕುಮಾರ್, ಯುವ ಮೋಚರ್ಾ ಜಿಲ್ಲಾಧ್ಯಕ್ಷ ಹೆಚ್.ಎಂ.ರಘು, ಮುಖಂಡರಾದ ಅಶೋಕ್, ಮನುಕುಮಾರ್, ಮಧು, ಅಭಿಷೇಕ್, ಸುಧಾಕರ್, ಮತ್ತಿತರರು ಇದ್ದರು.