Ticker

6/recent/ticker-posts

*ಆದಿಚುಂಚನಗಿರಿಗೆ ಪ್ರಧಾನಿ ಮೋದಿಆಗಮನ ಶ್ರೀಮಠದ ಭಕ್ತರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವಂತೆ ಕರೆ: ರಾಜೇಶ್*


ನವಿಲುಗಿರಿ ಕ್ಷೇತ್ರಕ್ಕೆ ಮತ್ತೊಂದು ಗರಿ ಶ್ರೀ ಗುರು ಭೈರವೈಕ್ಯಮಂದಿರ

ನಾಗಮಂಗಲ. ಏ:-ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ವತಿಯಿಂದ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ,ಶ್ರೀ ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಮಾಡಲು
15.04 2026 ಬುಧವಾರ ಬೆಳಗ್ಗೆ 10 ಗಂಟೆಗೆಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು ಈ ಸಮಾರಂಭಕ್ಕೆ ಶ್ರೀಮಠದ ಭಕ್ತರು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ತಿಳಿಸಿದ್ದಾರೆ.

ಶ್ರೀ ಕ್ಷೇತ್ರದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರು ಹಾಗೂ ಕರ್ನಾಟಕ ಸರ್ಕಾರದ ಕೃಷಿ ಮಂತ್ರಿಗಳಾದ ಎನ್ ಚೆಲುವರಾಯಸ್ವಾಮಿ ರವರು ಭಾಗವಹಿಸಲಿದ್ದಾರೆ. ಅಲ್ಲದೆ ರಾಜ್ಯದ ನಾನಾ ಭಾಗಗಳಿಂದ ಕಾಂಗ್ರೆಸ್ ಮುಖಂಡರುಗಳು ಸಹ ಭಾಗವಹಿಸಲಿದ್ದಾರೆ.

ನಾಗಮಂಗಲ ತಾಲೂಕಿನ ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರುಗಳು ವಿವಿಧ ಘಟಕದ ಅಧ್ಯಕ್ಷರುಗಳು ಮತ್ತು ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್.ಜೆ. ರಾಜೇಶ್ ಮನವಿ ಮಾಡಿದ್ದಾರೆ.

ಇದೆ ಸಂದರ್ಭದಲ್ಲಿ ತಟ್ಟಹಳ್ಳಿ ನರಸಿಂಹಮೂರ್ತಿ. ಶರತ್ ರಾಮಣ್ಣ. ಸಂಪತ್ತು. ರವಿಕಾಂತ್ ಗೌಡ ರವರುಗಳು ಹಾಜರಿದ್ದರು.