ಕೆ.ಎಂ ದೊಡ್ಡಿ :-ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬೂತ್ ಮಟ್ಟದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸಲು ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಾದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಬೂತ್ ಮಟ್ಟದಲ್ಲಿ ನಾಯಕನ್ನು ಆಯ್ಕೆ ಮಾಡಲು ಸಿದ್ಧತೆ ನಡೆಸುತ್ತಿದ್ದು.
ಪಕ್ಷದ ಸಂಘಟನಾತ್ಮಕ ಸುಧಾರಣೆ ಮತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಪಾಲ್ಗೊಂಡು ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ ಕಡ್ಡಾಯವಾಗಿ ಪಾಲ್ಗೊಂಡು ಮಹತ್ವದ ಜವಾಬ್ದಾರಿಯಾದ ಮತದಾರರ ಹೆಸರನ್ನು ನೋಂದಾಯಿಸಲು ಕಾರ್ಯ ನಿರತರಾಗ ಬೇಕು ಎಂದು ಮಾಜಿ ಸಚಿವ ಡಿ.ಸಿ ತಮ್ಮಣ್ಣ ತಿಳಿಸಿದರು.
ಕೆ.ಎಂ ದೊಡ್ಡಿ ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಇರುವ ಅರು ಸಮುದಾಯದ ಭವನದಲ್ಲಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಸಮಗ್ರ ಪರೀಕ್ಷರಣೆಯ ಬಿಎಲ್ಎ- 2 ಕಾರ್ಯಗಾರವನ್ನು ಉದ್ಗಾಟಿಸಿ ಮಾತಾನಾಡಿದರು.
ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಮಾತನಾಡಿ ಬೂತ್ ಮಟ್ಟದ ಕಾರ್ಯಕರ್ತರು ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಪ್ರತಿ ಒಂದು ಮತವು ಅತ್ಯಾವಶ್ಯಕ, ಈ ಬಾರಿಯೂ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶವಿದ್ದು ,
ಮದ್ದೂರು ತಾಲೋಕಿನ ಸಮಗ್ರ ಅಭಿವೃದ್ಧಿಗಾಗಿ ಮಾಜಿ ಸಚಿವ ಡಿ.ಸಿ ತಮ್ಮಣ್ಣನವರ ಕೈ ಬಲಪಡಿಸುವ ನಿಟ್ಟಿನಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ನಂತರ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಮಾತನಾಡಿ ಭಾರತ ದೇಶವು ವಿಶಾಲ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನದಲ್ಲಿ ನಮಗೆ ಮತದಾನ ಹಕ್ಕನ್ನು ನೀಡಿದ್ದು ಘನ ಸರ್ಕಾರದ ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು ಮತದಾನ ಪಟ್ಟಿಯ ಹೆಸರನ್ನಿ ನೋಂದಾಯಿಸಲು ಅಧಿಕಾರಿಗಳು ನಿಮ್ಮ ಬಾಗಿಲಿಗೆ ಬರುತ್ತಾರೆ ಮನೆ ಮನೆಗೆ ಬಂದಾಗ ಮನೆಯ ಸದಸ್ಯರು ಸೂಕ್ತ ಮಾಹಿತಿ ನೀಡಿ ಮತದಾನ ಪಟ್ಟಿಯಲ್ಲಿ ಹೆಸರನ್ನು ಅಗತ್ಯ ದಾಖಲಾತಿಗಳನ್ನು ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಿ ಮತದಾನ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೇಗೊಳ್ಳುವುದು , ಮತದಾನ ಪಟ್ಟಿಯಲ್ಲಿ ಹೆಸರನ್ನು ಕೈ ಬಿಟ್ಟದೇ ಎಂದು ಎಂಬುವುದು ಪರಿಶೀಲನೆ ನಡೆಸಿ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಕಾನೂನು ವಿಭಾಗದ ಮುಖ್ಯಸ್ಥರಾದ ಪ್ರದೀಪ್ ಹಾಗೂ ಜೆಡಿಎಸ್ ವಕ್ತಾರರಾದ ಮಹೇಶ್ ರವರು ಎಸ್.ಐ .ಆರ್ ಪ್ರಕ್ರಿಯೆಯಲ್ಲಿ ಬಿ.ಎಲ್.ಎ -2 ಗಳು ಯಾವ ರೀತಿ ಕರ್ತವ್ಯ ನಿರ್ವಹಿಸಬೇಕು ಎಂದು ಕಾರ್ಯಾಗಾರ ನಡೆಸಿ ತಿಳಿಸಿದರು.
ಇದೆ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಮುಖಂಡರಾದ, ಮಾಜಿ ಪುರಸಭೆ ಅಧ್ಯಕ್ಷ ಪ್ರವೀಣ್ , ಕರಡಕೆರೆ ಹನುಮಂತೇಗೌಡ ,ಮಹೇಶ್, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾರಾಮಚಂದ್ರು, ಗುರುದೇವರಹಳ್ಳಿ ಅರವಿಂದ್, ಕೊಳಗೇರೆ ಶೇಖರ್ ,ಕೆ.ಪಿ ದೊಡ್ಡಿ ಶಿವರಾಮು, ಕೇಸ್ತೂರು ರಾಜಣ್ಣ, ವೆಂಕಟಾಚಲಯ್ಯ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
