Ticker

6/recent/ticker-posts

ಮುತ್ತಗಿ ಗ್ರಾಮ ಪಂಚಾಯಿತಿ ಪಿಡಿಒಗೆ ಮನವಿಬಿ.ಶಿಗ್ಗಿಗಟ್ಟಿ ತಾಂಡಾದ ಮೂಲಸೌಕರ್ಯ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ

ಕಲಘಟಗಿ: ಕಲಘಟಗಿ ತಾಲೂಕಿನ ಮುತ್ತಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಶಿಗ್ಗಿಗಟ್ಟಿ ತಾಂಡಾ ನಿವಾಸಿಗಳು ತಮ್ಮ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಗೆ ಮನವಿ ಸಲ್ಲಿಸಿದರು.

ತಾಂಡಾದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ, ಚರಂಡಿ ಹಾಗೂ ಸ್ವಚ್ಛತಾ ವ್ಯವಸ್ಥೆಗಳ ಕೊರತೆಯಿಂದ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ವಿಶೇಷವಾಗಿ ಮಳೆಗಾಲದಲ್ಲಿ ರಸ್ತೆ ಹದಗೆಡುವುದರಿಂದ ಸಂಚಾರಕ್ಕೂ ಸಮಸ್ಯೆಯಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಗ್ರಾಮದ ಸಮಸ್ಯೆಗಳನ್ನು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಕೈಗೊಂಡು ಶೀಘ್ರದಲ್ಲೇ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಬಿಜೆಪಿ ಮುಖಂಡ ಅರ್ಜುನ್ ಲಮಾಣಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಮೆಶ ಲಮಾಣಿ, ಅರ್ಜುನ್ ಲಮಾಣಿ, ಲಾಲಪ್ಪ ಲಮಾಣಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

✍️.  ವರದಿ: ಮಾರುತಿ   ಲಮಾಣಿ