ಕಲಘಟಗಿ: ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರು ಕಲಘಟಗಿ ತಾಲೂಕಿನ ಹಿರೇಹೊನ್ನಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, CRIF ಯೋಜನೆಯಡಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ, CSR ಅನುದಾನದಡಿ ನಿರ್ಮಾಣಗೊಳ್ಳುತ್ತಿರುವ ಶಾಲಾ ಕೊಠಡಿಗಳು ಸೇರಿದಂತೆ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಬಳಿಕ ಗ್ರಾಮದ ಹಿರಿಯರು ಹಾಗೂ ಗಣ್ಯರೊಂದಿಗೆ ಸಭೆ ನಡೆಸಿದ ಸಚಿವರು, ಹಿರೇಹೊನ್ನಿಹಳ್ಳಿ ಗ್ರಾಮದ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ, ಶಿಕ್ಷಣ ಸೇರಿದಂತೆ ವಿವಿಧ ಯೋಜನೆಗಳ ಕುರಿತು ವಿಸ್ತೃತವಾಗಿ ಚರ್ಚಿಸಿ,
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಮಂಡಲ ಬಿಜೆಪಿ ಅಧ್ಯಕ್ಷ ಯಲ್ಲಾರಿ ಶಿಂಧೆ, ಮಾಲಾ ಗೋಕುಲ, ಗೀತಾ ಮರಲಿಂಗಣ್ಣವರ, ಕಿರಣ ಪಾಟೀಲ ಕುಲಕರ್ಣಿ, ಬಸವರಾಜ ಶೇರೆವಾಡ, ಶಿವಲಿಂಗಪ್ಪ ಯಲಿವಾಳ, ವಿನಾಯಕ ಧನಿಗೊಂಡ, ವೀರಭದ್ರ ಮನಗುಂಡಿ, ಚನ್ನಪ್ಪ ಮುಗದ ಸೇರಿದಂತೆ ಗ್ರಾಮದ ಹಿರಿಯರು, ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
✍️. ವರದಿ. ಮಾರುತಿ ಲಮಾಣಿ
