Ticker

6/recent/ticker-posts

ಕರ್ತವ್ಯ ಲೋಪ: PDO ಯಂಕಪ್ಪ ಅಮಾನತು

ಕಲಘಟಗಿ : ತಾಲ್ಲೂಕಿನ ದೆವಿಕೋಪ್ಪ  ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಯಂಕಪ್ಪ ಅವರನ್ನು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ದೆವಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಂಕಪ್ಪ ಅವರನ್ನು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಅವಧಿಯಲ್ಲಿ ಅವರು ಇಲಾಖೆಯ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ತೊರೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಜಾರಿಯಲ್ಲಿರಲಿದೆ.

 ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

✍️. ವರದಿ  ಮಾರುತಿ ಲಮಾಣಿ