Ticker

6/recent/ticker-posts

​ಮಂಡ್ಯದಲ್ಲಿ ಆಗಸ್ಟ್ 10 ರಂದು ಐತಿಹಾಸಿಕ 'ಜೈಲ್ ಭರೋ 'ಬೃಹತ್ ಪ್ರತಿಭಟನೆ ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪುಟ್ಟಮಾದು.​


​ಕೆ.ಎಂ ದೊಡ್ಡಿ :- ಭಾರತದ ​ಐತಿಹಾಸಿಕ 'ಕ್ವಿಟ್ ಇಂಡಿಯಾ' ಚುವಳಿಯ ನೆನಪು ಮತ್ತು ಸ್ಪೂರ್ತಿಯಲ್ಲಿ, ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ "ಕಾಪೋರೇಟ್‌ಗಳೇ ದೇಶ ಬಿಟ್ಟು ತೊಲಗಿ" ಎಂಬ ಘೋಷಣೆಯೊಂದಿಗೆ ಆಗಸ್ಟ್ 10, 2026ರ ಸೋಮವಾರದಂದು ಬೃಹತ್  'ಜೈಲ್ ಭರೋ' ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೃಷಿ ಕೂಲಿಕಾರರ  ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪುಟ್ಟಮಾದು ತಿಳಿಸಿದರು.

ಕೆ.ಎಂ ದೊಡ್ಡಿಯ ಕರ್ನಾಟಕ ಕೃಷಿ ಕೂಲಿಕಾರಾರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ  ಕಚೇರಿಯಲ್ಲಿ  ಪ್ರತಿಕಾಗೋಷ್ಠಿ ನಡೆಸಿ 
ಕರ್ನಾಟಕ ರಾಜ್ಯ ಸಂಯುಕ್ತ ಹೋರಾಟ ಕರ್ನಾಟಕ (SHK), ಸಂಯುಕ್ತ ಕಿಸಾನ್ ಮೋರ್ಚಾ (SKM) ಹಾಗೂ ಜಂಟಿ ಕಾರ್ಮಿಕ ಸಂಘಟನೆ (JCTU) ಜಂಟಿಯಾಗಿ
​ದಿನಾಂಕ ಆಗಸ್ಟ್ 10, 2026 ಸೋಮವಾರ ಬೆಳಿಗ್ಗೆ 10:30 ಗಂಟೆಗೆ
​ 
ಸಿಲ್ವರ್ ಜುಬಿಲಿ ಪಾರ್ಕ್ನಿಂದ ಮೆರವಣಿಗೆ ಸಾಗಿ ಮಂಡ್ಯ
​ ಸಂಜಯ್ ಸರ್ಕಲ್ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

​ಕಾರ್ಮಿಕ ಹಾಗೂ ಕೃಷಿ ವಿರೋಧಿ ಕಾಯ್ದೆಗಳ ರದ್ದುಪಡಿಸಿ
ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ, ಕಾರ್ಪೋರೇಟ್ ಭೂ ಕಬಳಿಕೆ ಹಾಗೂ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಲಾಗಿದೆ.

​ಮಂರೇಗಾ (MGNREGA) ವಿಸ್ತರಣೆ ಮಾಡುವಂತೆ 
ವಿಜಿ ಗ್ರಾಮ್ ಜಿ ಕಾಯ್ದೆಯನ್ನು ಹಿಂಪಡೆದು MGNREGA ಯೋಜನೆಯನ್ನು ಮುಂದುವರಿಸಿ, ವರ್ಷಕ್ಕೆ 200 ದಿನಗಳ ಕೆಲಸ ಹಾಗೂ ದಿನಕ್ಕೆ 700 ರೂ. ಕೂಲಿ ನೀಡಬೇಕು. ವಿದ್ಯುತ್ ತಿದ್ದುಪಡಿ ಕಾಯ್ದೆ 2025, ಬೀಜ ಕಾಯ್ದೆ ಮತ್ತು ಕೃಷಿ ಮಾರುಕಟ್ಟೆ ರಾಷ್ಟ್ರೀಯ ಧೋರಣೆ ಚೌಕಟ್ಟುಗಳನ್ನು ರದ್ದುಪಡಿಸಲು ಒತ್ತಾಯಿಸಲಾಗಿದೆ ಎಂದು ತಿಳಿಸಿದರು.

ಡಾ. ಎಂ.ಎಸ್. ಸ್ವಾಮಿನಾಥನ್ ವರದಿ ಶಿಫಾರಸಿನಂತೆ ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಬಲ ನೀಡಬೇಕು. ಎಲ್ಲಾ ರೈತರು ಹಾಗೂ ಕೃಷಿಕೂಲಿಕಾರ-ಮಹಿಳೆಯರ ಸಾಲ ಮನ್ನಾ ಮಾಡಬೇಕು.
​ಬೆಲೆ ಏರಿಕೆ ನಿಯಂತ್ರಣ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕ, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟಿ, ಬ್ಯಾಂಕ್, ವಿಮೆ, ಆರೋಗ್ಯ ಹಾಗೂ ಶಿಕ್ಷಣದ ಖಾಸಗೀಕರಣವನ್ನು ನಿಲ್ಲಿಸಬೇಕು. ಎಂದು ಒತ್ತಾಯಿಸಿ,ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಿಲ್ಲೆಯಾದ್ಯಂತ ಬರಗಾಲ ಪರಿಹಾರ ಕ್ರಮಗಳನ್ನು  ಕೈಗೊಳ್ಳುವುದು, ಬಗರ್ ಹುಕುಂ ಸಾಗುವಳಿದಾರರಿಗೆ ಹಾಗೂ ನಿವೇಶನ ರಹಿತರಿಗೆ ಹಕ್ಕುಪತ್ರ ನೀಡುವುದು ಮತ್ತು ಭಾರತ-ಅಮೆರಿಕ ಒಪ್ಪಂದವನ್ನು ರದ್ದುಪಡಿಸಲು ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ​ಮಂಡ್ಯ ಜಿಲ್ಲೆಯಲ್ಲಿ ರೈತರು, ಕಾರ್ಮಿಕರು, ಕೃಷಿಕೂಲಿಕಾರರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವಜನರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಈ ಮಹಾನ್ ಹೋರಾಟವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಇದೆ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ.ಎಂ ಶಿವಮಲ್ಲಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್,ಜಿಲ್ಲಾ ಉಪಾಧ್ಯಕ್ಷ ವಿಷಕಂಠೇಗೌಡ, ಶೋಭಾ,ರಾಜ್ಯ ಸಮಿತಿ ಸದಸ್ಯರಾದ ಚಂದ್ರಕಲಾ,ಮಳವಳ್ಳಿ ತಾಲೂಕು ಘಟಕದ ಅಧ್ಯಕ್ಷ ಟಿ.ಹೆಚ್ ಆನಂದ್,ತಳಗವಾದಿ ವಲಯ ಸಮಿತಿ ಅಧ್ಯಕ್ಷ ರಾಮಯ್ಯ ಹಾಡ್ಲಿ ವಲಯ ಸಮಿತಿ ಅಧ್ಯಕ್ಷ ಜ್ಯೋತಿ ಸೇರಿದಂತೆ ಇತರರು ಉಪಸ್ಥಿತರಿದ್ದರು..