Ticker

6/recent/ticker-posts

ನೀರಿನ ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಿ. ಶಾಸಕ ಎಂ.ಆರ್.ಮಂಜುನಾಥ್

ಹನೂರು, ತಾಲೂಕಿನ ವಿವಿಧ ಗ್ರಾಮಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಎಂ.ಆರ್.ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತು ಟಾಸ್ಕ್ ಫೋರ್ಸ್ ಸಭೆ ಮಾತನಾಡಿದ ಅವರು ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಪ್ರಸ್ತುತ ನೀರಿನ ಪರಿಸ್ಥಿತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಸುಮಾರು 20 ದಿನಗಳ ಹಿಂದೆ  ನಡೆದ ಸಭೆಯಲ್ಲಿ ನೀಡಿದ ಸೂಚನೆಯಂತೆ ತಾಲೂಕಿನ ಕೆಲವು ಭಾಗಗಳಲ್ಲಿ 74 ಬೋರ್‌ವೆಲ್‌ಗಳನ್ನು ಕೊರೆಸಲಾಗಿದ್ದು, ಅಗತ್ಯವಿರುವ ಇನ್ನಿತರ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸುವಂತೆ ತಿಳಿಸಿದರು.

ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಮಾಪುರ, ಅಜ್ಜೀಪುರ, ಕೌದಳ್ಳಿ, ಎಲ್ಲೆಮಾಳ ಹಾಗೂ ಹುತ್ತೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಹೆಚ್ಚಿನ ಆದ್ಯತೆ ನೀಡಿ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ  ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿ ಗ್ರಾಮದಲ್ಲೂ ಜನರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಸ್ಥಳೀಯವಾಗಿ ಸಮಸ್ಯೆಗಳನ್ನು ಗುರುತಿಸಿ ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವುದರ ಜೊತೆಗೆ ಶಾಶ್ವತ ಪರಿಹಾರಕ್ಕಾಗಿ ಬೋರ್‌ವೆಲ್ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು. ಎಂದರು

ಸಭೆಯಲ್ಲಿ ತಹಸೀಲ್ದಾರ್ ಚೈತ್ರಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಸಹಾಯಕ ನಿರ್ದೇಶಕ ರವೀಂದ್ರ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಧನ್ವಾನಾಗ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ, ತಾಲೂಕು ಪಶುವೈದ್ಯಾಧಿಕಾರಿ ಶಿವರಾಜು, ಪಟ್ಟಣ ಪಂಚಾಯಿತಿ ಜೆ.ಇ. ನಾಗರಾಜ್ ಸೇರಿದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ, ಪುಟ್ಟಸ್ವಾಮಿ. ಆರ್ ಹನೂರು