Ticker

6/recent/ticker-posts

ಆನಾಪುರ ಗ್ರಾಮದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಶಾಸಕ ಎಂ.ಆರ್. ಮಂಜುನಾಥ್ ತುರ್ತು ಕ್ರಮ

ಹನೂರು: ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನಾಪುರ ಗ್ರಾಮಕ್ಕೆ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು.

ಗ್ರಾಮದಲ್ಲಿ ಹಲವು ವರ್ಷಗಳಿಂದ ಎದುರಾಗಿರುವ ಸಿಸಿ ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ, ಸಮುದಾಯ ಭವನ ಹಾಗೂ ಕುಡಿಯುವ ನೀರಿನ ಅಭಾವದ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.

 ಸಾರ್ವಜನಿಕರ ಮನವಿಗೆ ಸ್ಥಳದಲ್ಲೇ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸಮಸ್ಯೆಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ಪರಿಹರಿಸುವಂತೆ ಗಂಭೀರ ಸೂಚನೆ ನೀಡಿದರು. ಕುಡಿಯುವ ನೀರಿನಂತಹ ತುರ್ತು ಅಗತ್ಯಗಳಿಗೆ ಮೊದಲ ಆದ್ಯತೆ ನೀಡುವಂತೆ ನಿರ್ದೇಶಿಸಿದರು. 

ಆನಾಪುರ ಗ್ರಾಮದ ಶಾಲಾ ಮಕ್ಕಳು ಶಾಲೆಗೆ ತೆರಳಲು ಮತ್ತು ಮರಳಲು ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದು ನಿಗದಿತ ಸಮಯಕ್ಕೆ ಬಸ್ ಸಂಚಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. 

ಮಕ್ಕಳ ಶಿಕ್ಷಣಕ್ಕೆ ಅಡಚಣೆಯಾಗದಂತೆ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ವ್ಯವಸ್ಥೆ ಮಾಡುವುದಾಗಿ ಶಾಸಕರು ಭರವಸೆ ನೀಡಿದರು.

ಸ್ಥಳದಲ್ಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕರ ನಡವಳಿಕೆಗೆ ಆನಾಪುರ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಶಂಕರ್. ಎಂ