Ticker

6/recent/ticker-posts

ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ30 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆ


ಪಾವಗಡ: ಪಟ್ಟಣದ ಆಂಜನೇಯ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

ಶಾಸಕ ಎಚ್.ವಿ. ವೆಂಕಟೇಶ್ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಮಾನಂ ವೆಂಕಟಸ್ವಾಮಿ ಅವರ ಮಾರ್ಗದರ್ಶನದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 120ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ತಪಾಸಣೆ ನಡೆಸಿದ ಬಳಿಕ 30 ಮಂದಿಯನ್ನು ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಗಿದೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ತಿಳಿಸಿದರು.

ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಮಾನಂ ಶಶಿಕಿರಣ್, ಗ್ರಾಮೀಣ ಪ್ರದೇಶದ ಸಾರ್ವಜನಿಕರು ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದೃಷ್ಟಿ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಇಂತಹ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿಯ ಸಮಾಜ ಸೇವಾ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿರುವ ತಾಳೆಮರದಹಳ್ಳಿ ನರೇಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ಶಂಕರ ಕಣ್ಣಿನ ಆಸ್ಪತ್ರೆಯ ಆಯೋಜಕರಾದ ಹರೀಶ್, ಪವಿತ್ರ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.