Ticker

6/recent/ticker-posts

ಅರಸೀಕೆರೆಯಲ್ಲಿ ₹65 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಶಂಕುಸ್ಥಾಪನೆ



ಪಾವಗಡ: ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಉತ್ತಮ ಆರೋಗ್ಯ ಸೇವೆ ದೊರೆಯುವ ನಿಟ್ಟಿನಲ್ಲಿ ಆರೋಗ್ಯ ಮಂದಿರ ನಿರ್ಮಾಣವಾಗುತ್ತಿದ್ದು, ಇದರಿಂದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಹೆಚ್. ವಿ. ವೆಂಕಟೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ವೈ. ರವಿ, ತಾಲ್ಲೂಕು ಪಂಚಾಯಿತಿ ಇಒ ಮಧುಸೂದನ್, ವೈದ್ಯಾಧಿಕಾರಿ ಡಾ. ನಾಗೇಶ್ ನಾಯ್ಕ್, ದೊಡ್ಡಣ್ಣ, ನಾಗರಾಜಪ್ಪ, ಡಿ.ಸಿ.ಮಂಜುನಾಥ್, ವಾಗೀಶ್, ಹೊನೇಶ್, ವೀರೇಂದ್ರಪ್ಪ, ಸಿದ್ದಲಿಂಗಪ್ಪ,  ಹನುಮಂತರಾಯಪ್ಪ, ಕರಿಯಣ್ಣ, ಪುಟ್ಟಣ್ಣ ಸೇರಿದಂತೆ ಹಲವು ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.