Ticker

6/recent/ticker-posts

*ಸ್ಥಳೀಯ ಚುನಾವಣೆಗಳಿಗೆ ಸಜ್ಜಾಗಲು ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಸಕ ಕೆ.ಎಂ. ಉದಯ್ ಕರೆ*

 *​ಕೆ.ಎಂ.ದೊಡ್ಡಿ:-* ಕಾಂಗ್ರೆಸ್ ಪಕ್ಷದ ಬಲವೇ ಕಾರ್ಯಕರ್ತರಾಗಿದ್ದು, ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧರಾಗುವಂತೆ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ. ಉದಯ್ ಕರೆ ನೀಡಿದ್ದಾರೆ.

​ಕೆ.ಎಂ.ದೊಡ್ಡಿ ಸಮೀಪದ ಅಣ್ಣೂರು ಮತ್ತು ಕೆ.ಎಂ ದೊಡ್ಡಿ ಗ್ರಾಮಗಳಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಕುಂದು-ಕೊರತೆ ಸಭೆಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷವನ್ನು ​ಬೂತ್ ಮಟ್ಟದ ಸಂಘಟನೆ ಮಾಡುವ ನಿಟ್ಟಿನಲ್ಲಿ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಪ್ರತಿ ಗ್ರಾಮದಲ್ಲಿ 20 ಸದಸ್ಯರ ಬೂತ್ ಸಮಿತಿ ಹಾಗೂ 3 ರಿಂದ 4 ಪ್ರಮುಖ ಮುಖಂಡರನ್ನು ಒಳಗೊಂಡ ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ,ಸಮಿತಿಯ ಸದಸ್ಯರು ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದು ಕೊಂಡು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸಬೇಕು ಎಂದು ತಿಳಿಸಿದರು
ಗ್ರಾಮದ ಅಭಿವೃದ್ಧಿಗೆ ಹಾಗೂ ಪಕ್ಷದ ಹಿತದೃಷ್ಟಿಯಿಂದ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪರಸ್ಪರ ವಿಶ್ವಾಸದಿಂದ ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು.

​ ರಾಜ್ಯ ಸರ್ಕಾರದ ಜನಪರ ಯೋಜನೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಹೀಗಾಗಿ ಕಾರ್ಯಕರ್ತರು ಸಂಘಟಿತರಾಗಬೇಕು 

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೇರಿ ತಕ್ಷಣವೇ ಯುವ ಶಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 'ಭಾರತ್ ಜೋಡೋ' ಹೆಸರಿನಲ್ಲಿ ಯುವಕರ ಸಂಘ ತೆರೆದು, ಸಂಘದ ಅಭಿವೃದ್ಧಿಗೆ ಪ್ರತಿವರ್ಷ 10 ಲಕ್ಷ ರೂಪಾಯಿ ಅನುದಾನ ನೀಡುವ ಮಹತ್ವಾಕಾಂಕ್ಷಿ ಯೋಜನೆಯ ಮಾರ್ಗಸೂಚಿಗಳು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಸ್ಥಳೀಯ ಪಿಡಿಒಗಳಿಂದ ಮಾಹಿತಿ ಪಡೆಯಲು ಸೂಚಿಸಲಾಗಿದೆ.

ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲು ತಲಾ 6 ಸದಸ್ಯರ ಒಳಗೊಂಡ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗಿದೆ ಇದರಿಂದ ಗ್ರಾಮ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲು ಸಹಕಾರಿಯಾಗುತ್ತದೆ ಎಂದು  ತಿಳಿಸಿದರು.

ಶಾಸಕ ಕೆ.ಎಂ ಉದಯ್ ರವರು ತಾಲೋಕಿನ ಜನತೆಗೆ ಒಂದು ವಿಶೇಷ ಮನವಿಯನ್ನು ಮಾಡಿದ್ದಾರೆ ಕ್ಷೇತ್ರದಲ್ಲಿ ಶಾಸಕರನ್ನು ಭೇಟಿಯಾಗಲು ಬರುವವರು ಹಾರ ತುರಾಯಿಗಳನ್ನು ತರಬಾರದು ಹಾಗೂ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸಬಾರದೆಂದು ವಿಶೇಷವಾಗಿ ಮನವಿ ಮಾಡಿದ್ದಾರೆ.
 
 ಮನ್ಮುಲ್ ನಿರ್ದೇಶಕ ಹಾಗೂ  ​ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ರಾಜೀವ್ ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ಮದ್ದೂರು ಕ್ಷೇತ್ರಕ್ಕೆ ಸುಮಾರು ಎರಡು ಸಾವಿರ ಕೋಟಿ ರೂ.ಗಳಿಗೂ ಅಧಿಕ ಅನುದಾನ ತಂದು  ರಾಜ್ಯದಲ್ಲಿ ಯಾವೊಬ್ಬ ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ  ಅನುದಾನ ತಂದು ಕ್ಷೇತ್ರದ  ಅಭಿವೃದ್ಧಿ ಮಾಡಿರುವ ಶಾಸಕ ಕೆ.ಎಂ. ಉದಯ್ ಅವರ ಕೈಬಲಪಡಿಸಲು  ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ತಿಳಿಸಿದರು.

​ಈ ಸಂದರ್ಭದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಆರ್ಥಿಕ ನೆರವು
 ನೀಡಲಾಯಿತು. 

ಸಭೆಯಲ್ಲಿ ಮನ್ಮುಲ್ ನಿರ್ದೇಶಕ , ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್  ಮಾಜಿ ಗ್ರಾಪಂ ಅಧ್ಯಕ್ಷ ರವಿ, ಸದಸ್ಯರಾದ ಚಂದ್ರಶೇಖರ್ ಮುಖಂಡರಾದ ಆನಂದ್, ಮನೋಹರ್,ಪಿಣ್ಣ ಸತೀಶ್ ರಾಘವೇಂದ್ರ ಕಾರ್ಕಳ್ಳಿ ಸಚ್ಚಿನ್ ,ಕೆ.ಎಂ ದೊಡ್ಡಿ  ಮುಖಂಡರಾದ ಶ್ರೀನಿವಾಸ್,ಪುಟ್ಟರಾಮು,ಪೂಜಾರಿ ಮಹೇಶ್,ಸಿದ್ದರಾಜು, ಸೇರಿದಂತೆ  ಹಲವು ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

 *ವರದಿ :- ಸಂತೋಷ್ ಟಿಬಿ*