Ticker

6/recent/ticker-posts

ಮೋದಿ ಹುಟ್ಟುಹಬ್ಬ: ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ


ಪಾವಗಡ: ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ 10 ಕೆ.ಜಿ. ತೂಕದ ಬೃಹತ್ ಕೇಕ್ ಕತ್ತರಿಸಿ ಮೋದಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಬಳಿಕ ಕಾರ್ಯಕರ್ತರು ಪಟಾಕಿ ಸಿಡಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸದಸ್ಯ ರತ್ನಯ್ಯ ಶೆಟ್ಟಿ, ಮುಖಂಡರಾದ ಬಿ.ಹೊಸಹಳ್ಳಿ ನಾಗರಾಜು, ಹರೀಶ್ ನಾಯ್ಕ, ಅಭಿ, ಶಬರೀಶ್, ಸಂದೀಪ್, ಬಾಲರಾಜು, ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.