ಬೇಲೂರು.ಪಟ್ಟಣದ ಗುರಪ್ಪಗೌಡ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ವಿರುದ್ಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರಪ್ಪಗೌಡ ರಸ್ತೆಯ ನಿವಾಸಿ ಗಿರಿಜಾ (29) ಅವರು ನೀಡಿದ ದೂರಿನ ಮೇರೆಗೆ ಸ್ವಾಮಿ ಅಲಿಯಾಸ್ ಪ್ರದೀಪ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸೆ.24ರಂದು ರಾತ್ರಿ ಸುಮಾರು 9.30ರ ವೇಳೆಯಲ್ಲಿ ಘಟನೆ ನಡೆದಿದ್ದು, ಹಲ್ಲೆಯಿಂದ ಗಿರಿಜಾ ಅವರಿಗೆ ಗಂಭೀರ ಗಾಯವಾಗಿದ್ದು, ಅವರ ಪತಿ ಬಸವರಾಜು (32) ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.270/2026ರಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.
ಘಟನೆ ಕುರಿತು ಬೇಲೂರು ಸಿಪಿಐ ರೇವಣ್ಣ ಮಾತನಾಡಿ, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಘಟನೆಯ ಸಂಪೂರ್ಣ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
