Ticker

6/recent/ticker-posts

ಆಗ್ನೇಯ ಪದವೀಧರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಕೆ.ಎಂ. ಸುರೇಶ್‌ಗೆ ಮತ ನೀಡಿ: ಶಿವಪ್ರಸಾದ್ ಮನವಿ

ಪಾವಗಡ: ಆಗ್ನೇಯ ಪದವೀಧರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರನ್ನು ಬೆಂಬಲಿಸಿ ಮತ ಚಲಾಯಿಸುವಂತೆ ಬಿಜೆಪಿ ರೈತ ಮೋರ್ಚಾ ರಾಜ್ಯ ನಿಕಟಪೂರ್ವ ಉಪಾಧ್ಯಕ್ಷ ಶಿವಪ್ರಸಾದ್ ಮನವಿ ಮಾಡಿದರು.

ತಾಲ್ಲೂಕಿನ ವಿವಿಧ ಕಾಲೇಜುಗಳು, ನ್ಯಾಯಾಲಯ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿದ ಶಿವಪ್ರಸಾದ್, ಶಿಕ್ಷಕರು ಹಾಗೂ ಪದವೀಧರರನ್ನು ಭೇಟಿಯಾಗಿ ಅಭ್ಯರ್ಥಿ ಪರ ಮತಯಾಚಿಸಿದರು.

ಶಿಕ್ಷಕರು ಮತ್ತು ಪದವೀಧರರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಆಶೋತ್ತರಗಳಿಗೆ ಧ್ವನಿಯಾಗುವ ಪ್ರತಿನಿಧಿಯನ್ನು ಆಯ್ಕೆ ಮಾಡುವುದು ಅಗತ್ಯ. ಆದ್ದರಿಂದ ಪದವೀಧರರು ಎನ್.ಡಿ.ಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರಿಗೆ ಮತ ನೀಡಿ ಬೆಂಬಲಿಸಬೇಕು ಎಂದು ಕೋರಿದರು.
ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದು ಪದವೀಧರರ ಹಿತಾಸಕ್ತಿಗಾಗಿ ಶ್ರಮಿಸುವ ನಾಯಕತ್ವಕ್ಕೆ ಬೆಂಬಲ ನೀಡಬೇಕು ಎಂದರು.

ಜಿ.ಟಿ. ಗಿರೀಶ್ ಮಾತನಾಡಿ, ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಮಹತ್ವದ್ದಾಗಿದ್ದು, ಮತದಾರರು ತಮ್ಮ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸಬೇಕು. ಪದವೀಧರರ ಹಿತಾಸಕ್ತಿ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಎನ್.ಡಿ.ಎ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪುರುಷೋತ್ತಮ್ ರೆಡ್ಡಿ, ಬ್ಯಾಡನೂರು ಶಿವು, ಸೂರ್ಯನಾರಾಯಣ, ಗುಂಡಾರ್ನಳ್ಳಿ ತಿಪ್ಪೇಸ್ವಾಮಿ, ಅನಿಲ್ ಕುಮಾರ್, ಗೋವಿಂದಪ್ಪ, ತಿಪ್ಪೇಸ್ವಾಮಿ,  ಆಲ್ಕುಂದರಾಜು,ಸೇರಿದಂತೆ ಹಲವರು ಉಪಸ್ಥಿತರಿದ್ದರು.